ಜನಾಶೀರ್ವಾದ ಕಾರ್ಯಕ್ರಮಕ್ಕೆ ಕ್ಷಣಗಣನೆ


09-02-2018 462

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಜನಾಶೀರ್ವಾದ ಕಾರ್ಯಕ್ರಮಕ್ಕೆ ನಾಳೆ ಹೊಸಪೇಟೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ಮೂರು ಸಾವಿರ ಬಸ್ ಮತ್ತು ಬೈಕ್ ಗಳಲ್ಲಿ ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ಎಲ್ಲ ಕಾಂಗ್ರೆಸ್ ಮುಖಂಡರು ಒಟ್ಟಾಗಿ ಶ್ರಮಿಸುತ್ತಿದ್ದು ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದು ಸಂತೋಷ್ ಲಾಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Santosh Lad AICC ಜನಾಶೀರ್ವಾದ ನಿರೀಕ್ಷೆ