ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ


14-02-2018 508

ಬೆಂಗಳೂರು: ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂ. ಮೌಲ್ಯದ ಕೆಮಿಕಲ್ ಹಾಗೂ ಕಾರ್ಖಾನೆಯ ಇತರೆ ವಸ್ತುಗಳು ಸುಟ್ಟು ಭಸ್ಮವಾಗಿವೆ. ಬೆಂಗಳೂರು ಗ್ರಾಮಾಂತರ ನೆಲಮಂಗಲ ತಾಲ್ಲೂಕಿನ ಡಾಬಸ್ ಪೇಟೆಯ ಲಿಯೋನಿಡ್ ಕೆಮಿಕಲ್ ಪಿ.ವಿ.ಲಿಮಿಟೆಡ್ ಎಂಬ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಎರಡು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿ, ಹೆಚ್ಚಿನ ಅನಾಹುತಗಳಾಗುವುದನ್ನು ತಪ್ಪಿಸಿದೆ. ಆಕಸ್ಮಿಕ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

chemical Factory ಶಂಕೆ ಅವಘಡ