ಅರಣ್ಯಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು


17-02-2018 448

ಮೈಸೂರು: ದುಷ್ಕರ್ಮಿಗಳ ಕುಕೃತ್ಯದಿಂದ ನಂಜನಗೂಡಿನ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ತಾಲ್ಲೂಕಿನ ಕೋಣನೂರು ಕಿರು ಅರಣ್ಯದ ಸುಮಾರು 300 ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಘಟನೆಯಲ್ಲಿ ಕಡವೆ, ಜಿಂಕೆ ಸೇರಿದಂತೆ ಹಲವು ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಂಜನಗೂಡು ಠಾಣೆಯಲ್ಲಿ ದೂರು ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

fire at forest Nanjangud ಅರಣ್ಯ ಬೆಂಕಿಗಾಹುತಿ