ಪ್ರಣಾಳಿಕೆ ಬಿಡುಗಡೆಗೆ ಕಾಂಗ್ರೆಸ್ ಸಿದ್ಧತೆ


22-02-2018 409

ಬೆಂಗಳೂರು: ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಲು ಯತ್ನಿಸುತ್ತಿರುವ ಕಾಂಗ್ರೆಸ್ ಪಕ್ಷ 2018ರ ಚುನಾವಣೆ ಪ್ರಣಾಳಿಕೆ ಸಿದ್ಧತೆಗೆ ಭಾರೀ ಕಸರತ್ತು ನಡೆಸುತ್ತಿದೆ. ಚುನಾವಣಾ ಪ್ರಣಾಳಿಕೆ ಬಗ್ಗೆ ಇಂದು ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಯಲಿದ್ದು, ವೀರಪ್ಪ ಮೊಯ್ಲಿ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್ ಸೇರಿದಂತೆ 34 ಮುಖಂಡರು ಭಾಗಿಯಾಗಲಿದ್ದಾರೆ. 2013ರ ಚುನಾವಣಾ ಪ್ರಣಾಳಿಕೆಯಲ್ಲಿನ ಬಹುತೇಕ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷ, 2018ರ ಚುನಾವಣೆಗೆ 165 ಭರವಸೆಗಳನ್ನು ಹೊಂದಿರುವ ಪ್ರಣಾಳಿಕೆ ಹೊರಡಿಸಲು ಚಿಂತನೆ ನಡೆಸಿದೆ ಎಂದು ಸೂಪರ್ ಸುದ್ದಿಗೆ ತಿಳಿದು ಬಂದಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

congress Manifesto ಭರವಸೆ ಪ್ರಣಾಳಿಕೆ