ಮಡಿವಾಳ ಸಮುದಾಯದವರ ಪ್ರತಿಭಟನೆ


22-02-2018 443

ಬೆಂಗಳೂರು: ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿ ನಗರದಲ್ಲಿ ಪ್ರತಿಭಟನೆ ನಗರದಲ್ಲಿ ನಡೆಸಿದರು. ಕರ್ನಾಟಕ ರಾಜ್ಯ ಮಡಿವಾಳರ ಸಂಘದ ಆಶ್ರಯದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಮಡಿವಾಳ ಸಮುದಾಯದವರು ನಗರದ ಫ್ರೀಡಂ ಪಾರ್ಕ್‍ನಲ್ಲಿ ಸೇರಿ ಪ್ರತಿಭಟನೆ ನಡೆಸಿ ಪ್ರೋ.ಅನ್ನಪೂರ್ಣಮ್ಮ ವರದಿಯ ಆಧಾರದ ಮೇಲೆ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸಬೇಕು ಮತ್ತು ಮಡಿವಾಳರ ನಿಗಮವನ್ನು ಸ್ಥಾಪಿಸಬೇಕು ಎನ್ನುವುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಾಗಿವೆ. ತಮ್ಮ ಈ ಎರಡು ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟಿದ್ದ ಮಾತಿಗೆ ತಪ್ಪಿದ್ದಾರೆ. ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ನಂಜಪ್ಪ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದ 17 ರಾಜ್ಯಗಳಲ್ಲಿ ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ ಸಮಾಜದವರನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಈಗಾಗಲೇ ಸೇರಿಸಲಾಗಿದೆ. ಅದರಂತೆ ಕರ್ನಾಟಕದಲ್ಲಿಯೂ ಕ್ರಮ ಕೈಗೊಳ್ಳಬೇಕು. ಮಡಿವಾಳರ ಸಮಗ್ರ ಅಭಿವೃದ್ಧಿಗೆ ನಿಗಮ ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ಅವರು ಈ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಮಡಿವಾಳ ಸಮುದಾಯದವರು ಕಾಂಗ್ರೆಸ್ ವಿರುದ್ಧ ಮತ ಚಲಾಯಿಸುವ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

scheduled tribe freedom park ರಾಜ್ಯಾಧ್ಯಕ್ಷ ಸಮುದಾಯ