ರೈತ ಸಮಾವೇಶಕ್ಕೆ ಬಿಜೆಪಿ ಸಿದ್ಧತೆ


24-02-2018 578

ದಾವಣಗೆರೆ: ಇದೇ ತಿಂಗಳ 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ರೈತ ಸಮಾವೇಶದಲ್ಲಿ ಪಾಲ್ಗೊಂಡು ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ದಾವಣಗೆರೆಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರ ಬೃಹತ್ ಬೈಕ್ ರ‍್ಯಾಲಿಗೆ ಸಂಸದ ಜಿ.ಎಂ.ಸಿದ್ದೇಶ್ವರ್ ಚಾಲನೆ ನೀಡಿದ್ದಾರೆ. ನಗರದ ರಾಮ್ ಅಂಡ್ ಕೋ ಸರ್ಕಲ್ ನಿಂದ ಬೃಹತ್ ಬೈಕ್ ರ‍್ಯಾಲಿ ಹೊರಟ ಕಾರ್ಯಕರ್ತರು ರೈತ ಸಮಾವೇಶ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜನರಲ್ಲಿ ಮನವಿ ಮಾಡುತ್ತಿದ್ದಾರೆ.


ಒಂದು ಕಮೆಂಟನ್ನು ಬಿಡಿ