ಬಿಜೆಪಿಯಿಂದ ರೈತ ಪ್ರೇಮದ ನಾಟಕ? 


28-02-2018 461

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡಲು ಪ್ರಧಾನಿ ನರೇಂದ್ರ ಮೋದಿಗೆ ಮನಸ್ಸಿಲ್ಲ. ಮೋದಿ ಮತ್ತು ಯಡಿಯೂರಪ್ಪ ರೈತ ಪ್ರೇಮದ ನಾಟಕವಾಡುತ್ತಿದ್ದಾರೆ ಎಂದು ದಾವಣಗೆರೆಯಲ್ಲಿ ನಡೆದ ಬಿಜೆಪಿ ರೈತ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ಮೂಲಕ, ಟಾಂಗ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಬೃಹತ್ ಕೈಗಾರಿಕೆಗಳ ಸಾಲ ಮನ್ನಾ ಮಾಡಿದ್ದಾರೆ, ಆದರೆ ರೈತರ ಸಾಲ ಮನ್ನಾ ಮಾಡಲು ಏಕೆ ಆಗಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ