ಜೆಡಿಎಸ್ ನತ್ತ ಗುತ್ತೇದಾರ್ ಹೆಜ್ಜೆ? 


28-02-2018 523

ಕಲಬುರಗಿ: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಾಂತರಗಳು ಹೆಚ್ಚಾಗುತ್ತಿವೆ. ಸ್ಥಳೀಯ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು, ಜಿಲ್ಲೆಗೆ ಜೆಡಿಎಸ್ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ಭೇಟಿ ಹಿನ್ನೆಲೆ ಅವರ ಸ್ವಾಗತಕ್ಕೆ ದೊಡ್ಡ ಕಟೌಟ್ ಹಾಕಿಸಿದ್ದಾರೆ. 6 ಬಾರಿ ಶಾಸಕರಾಗಿರುವ ಗುತ್ತೇದಾರ್, ಮಂತ್ರಿಗಿರಿ ಸಿಗದ ಹಿನ್ನೆಲೆ ಅಸಮಾಧಾನಗೊಂಡು, ಹಲವು ಬಾರಿ ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದ್ದರು. ಹೀಗಾಗಿ, ಗುತ್ತೇದಾರ್ ಅವರು ದೇವೇಗೌಡರ ಸ್ವಾಗತಕ್ಕೆ ಮುಂದಾಗಿರುವ ವಿಚಾರ ಸಾಕಷ್ಟು ಸುದ್ದಿಮಾಡುತ್ತಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

malikayya guttedar H.D.deve gowda ಸ್ವಾಗತ ವಿಧಾನಸಭೆ