ನಾಪತ್ತೆಯಾಗಿದ್ದ ಮಕ್ಕಳು ವಾಪಸ್ 


01-03-2018 365

ಬೆಂಗಳೂರು: ಶಾಲೆಯಿಂದ ಮನೆಗೆ ವಾಪಸಾಗದೆ ನಾಪತ್ತೆಯಾಗಿದ್ದ ಸಿ.ವಿ ರಾಮನ್ ನಗರದ ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಾದ ಮೌಲೇಶ್, ಶ್ರೀರಾಮ್ ಹಾಗೂ ದರ್ಶನ್ ತೆಲಂಗಾಣದಲ್ಲಿ ಪತ್ತೆಯಾಗಿದ್ದಾರೆ. ಮೆಹಬೂಬ್ ನಗರ ರೈಲು ನಿಲ್ದಾಣದ ಬಳಿ ವಿದ್ಯಾರ್ಥಿಗಳು ಪತ್ತೆಯಾಗಿದ್ದು, ಅಲ್ಲಿನ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡು, ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಬಳಿಕ, ಅಲ್ಲಿಗೆ ತೆರಳಿದ ಬೆಂಗಳೂರು ಪೊಲೀಸರು ಬಾಲಕರನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ ಎಂದು ಡಿಸಿಪಿ ಅಜಯ್ ಹಿಲೋರಿ ತಿಳಿಸಿದ್ದಾರೆ. ಓದಿನಲ್ಲಿ ಹಿಂದಿದ್ದ ಈ ವಿದ್ಯಾರ್ಥಿಗಳು ನಾಪತ್ತೆಯಾಗುವ ಮುನ್ನ ಮನೆಯಿಂದ 3 ಸಾವಿರ ರೂಪಾಯಿ ತೆಗೆದುಕೊಂಡು ಹೋಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಬೈಯಪ್ಪನಹಳ್ಳಿ ಪೊಲೀಸರು, ಎಲ್ಲ ರೈಲ್ವೆ ನಿಲ್ದಾಣಗಳು ಮತ್ತು ಪೊಲೀಸ್ ಠಾಣೆಗಳಿಗೆ ಮಾಹಿತಿ ಕಳುಹಿಸಿ ತನಿಖೆ ಕೈಗೊಂಡಿದ್ದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Kidnap children ರೈಲ್ವೆ ನಿಲ್ದಾಣ ಬಾಲಕ