ಅತ್ಯಾಚಾರಿಗೆ 10 ವರ್ಷ ಜೈಲು ಶಿಕ್ಷೆ


01-03-2018 383

ಬೆಂಗಳೂರು: ಇಬ್ಬರನ್ನು ಮದುವೆಯಾಗಿ ಮೂವರು ಮಕ್ಕಳಿದ್ದರೂ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪಿಗೆ ನಗರದ ಸಿಟಿ ಸಿವಿಲ್ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. 2017ರ ಮಾರ್ಚ್ 10 ರಂದು ಜರಗನಹಳ್ಳಿಯಿಂದ 16 ವರ್ಷದ
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಕನಕಪುರದ ಕಬ್ಬಾಳು ಬಳಿಯ ಲಾಡ್ಜ್ ನಲ್ಲಿ ಅತ್ಯಾಚಾರವೆಸಗಿದ್ದ. ಪುಟ್ಟೇನಹಳ್ಳಿಯ ಆನಂದ್ (24)ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿಗಳ ದಂಡ ವಿಧಿಸಲಾಗಿದೆ. ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣವನ್ನು ಒಂದೇ ವರ್ಷದೊಳಗೆ ವಿಚಾರಣೆ ನಡೆಸಿ ಪೋಕ್ಸೊ ಕಾಯ್ದೆಯಡಿ ಶಿಕ್ಷೆ ವಿಧಿಸಿದ ಮೊದಲ ಪ್ರಕರಣ ಇದಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Rape court ಪ್ರಕರಣ ನ್ಯಾಯಾಲಯ