ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು


02-03-2018 628

ಮಡಿಕೇರಿ: ಪ್ರವಾಸಕ್ಕೆಂದು ಬಂದಿದ್ದ 30 ವಿದ್ಯಾರ್ಥಿಗಳಲ್ಲಿ ಓರ್ವ ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ, ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಹಾಸನ ಜಿಲ್ಲೆ ಅರಸಿಕೆರೆಯ ವಿನೋದ್(24) ಮೃತ ವಿದ್ಯಾರ್ಥಿ. ಅರಸಿಕೆರೆಯ ಹೊಯ್ಸಳೇಶ್ವರ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ತನ್ನ ಸ್ನೇಹಿತರೊಂದಿಗೆ ಕೊಡಗಿಗೆ ಪ್ರವಾಸ ಬಂದಿದ್ದ ವಿನೋದ್, ಕಣಿವೆ ರಾಮಲಿಂಗೇಶ್ವರ ದೇವಾಲಯ ಬಳಿ ಕಾವೇರಿ ನದಿಯಲ್ಲಿ ಕಾಲು ತೊಳೆಯಲು ನದಿಗೆ ಇಳಿದಿದ್ದು, ಈ ವೇಳೆ ಆಯತಪ್ಪಿ ನದಿಗೆ ಬಿದ್ದು  ಮೃತಪಟ್ಟಿದ್ದಾನೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Cauvery death ಪ್ರವಾಸ ನದಿ