ಬಿಜೆಪಿ ಯಾತ್ರೆಗಳಿಗೆ ಪರಂ ತಿರುಗೇಟು


03-03-2018 406

ಬೆಂಗಳೂರು: ಬಿಜೆಪಿ ಬಿಡುಗಡೆ ಮಾಡಿದ ಚಾರ್ಜ್ ಶೀಟ್ ನಲ್ಲಿ ನಕಲಿ ಫೋಟೋ ಬಳಕೆ ಮಾಡಲಾಗಿದೆ ಎನ್ನುವ ವಿಚಾರದ ಕುರಿತು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿ, ಬಿಜೆಪಿ ನಾಯಕರ ಬಣ್ಣ ಬಯಲಾಗಿದೆ,  ಬಿಜೆಪಿಯ ಎಡವಟ್ಟುಗಳನ್ನು ಜನರ ಮುಂದೆ ತೆಗೆದುಕೊಂಡು ಹೋಗಲಿದ್ದೇವೆ ಎಂದಿದ್ದಾರೆ.

ಬಿಜೆಪಿಯವರು ಜನರಿಗೆ ಸುಳ್ಳು ಹೇಳಬೇಕು ಎಂದು ನಿರ್ಧಾರ ಮಾಡಿದ್ದಾರೆ ಎಂಬಂತಿದೆ, ಮೋದಿಯಿಂದ ಹಿಡಿದು ಎಲ್ಲ‌ ಬಿಜೆಪಿ ನಾಯಕರು ಇದನ್ನೇ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಕೇಂದ್ರ ನಾಯಕರು ರಾಜ್ಯದಲ್ಲಿ ಪ್ರಚಾರಕ್ಕೆ ಬರುತ್ತಿರುವ ವಿಚಾರದ ಕುರಿತು ಮಾತನಾಡಿ, ನಮ್ಮಲ್ಲಿ ನಾಯಕರ ಕೊರತೆ ಇಲ್ಲ. ರಾಜ್ಯ ಬಿಜೆಪಿಯಲ್ಲಿ ನಾಯಕರುಗಳ ಕೊರತೆ ಇದೆ ಎನಿಸುತ್ತದೆ ಹೀಗಾಗಿ ಕೇಂದ್ರದ ಬಿಜೆಪಿ ನಾಯಕರು ಬರುತ್ತಿದ್ದಾರೆ ಎಂದು ಹೇಳಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Kpcc G. Parameshwara ನಾಯಕ ಕೊರತೆ