ಬೆಂಗಳೂರಲ್ಲಿ ಜೆಡಿಎಸ್ ಪಾದಯಾತ್ರೆ


06-03-2018 435

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಜನರ ಮುಂದೆ ಬರಲು ಹಲವಾರು ಯೋಜನೆಗಳನ್ನು ಹಾಕಿಕೊಳ್ಳುತ್ತಿವೆ. ಬಿಜೆಪಿಯ ಬೆಂಗಳೂರು ರಕ್ಷಿಸಿ ಪಾದಯಾತ್ರೆ ಬೆನ್ನಲ್ಲೇ ಜೆಡಿಎಸ್ ಕೂಡ ವಿಕಾಸ ಪರ್ವ ಪಾದಯಾತ್ರೆಗೆ ಮುಂದಾಗಿದೆ. ಇಂದಿನಿಂದ ಒಂದು ತಿಂಗಳ ಕಾಲ ಬೆಂಗಳೂರಿನಲ್ಲಿ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಯಲಿದೆ. ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಶಾಸಕ ಗೋಪಾಲಯ್ಯ, ಪರಿಷತ್ ಸದಸ್ಯ ಶರವಣ, ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ಆರ್.ಪ್ರಕಾಶ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

election padayatre ಶಾಸಕ ರಾಜ್ಯಸಭಾ