ಸಿದ್ದುಗೆ ಸವಾಲೆಸೆದ ಬಿಎಸ್ ವೈ..!


06-03-2018 461

ಮೈಸೂರು: ಸಿಎಂ ಸಿದ್ದರಾಮಯ್ಯ ಒಬ್ಬ ಭ್ರಷ್ಟ ಮುಖ್ಯಮಂತ್ರಿ ಈ ಬಾರಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಮುಖ್ಯಮಂತ್ರಿ ಬಿಎಸ್ವೈ ಬಹಿರಂಗ ಸವಾಲು ಹಾಕಿದ್ದಾರೆ.

ಭ್ರಷ್ಟರು ಯಾರು ಎಂಬ ಬಹಿರಂಗ ಚರ್ಚೆಗೆ ಕರೆ ನೀಡಿದ್ದ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಎಸ್ ವೈ, ನಾನು ಅವರ ಬಳಿ ಯಾವುದೇ ಬಹಿರಂಗ ಚರ್ಚೆಗೆ ಹೋಗಲ್ಲ ಅವರಿಗೆ ನನ್ನ ಬಳಿ ಮಾತನಾಡು ನೈತಿಕತೆ ಇಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ನ ಕೊನೆ ಮುಖ್ಯಂತ್ರಿ, ಅವರು ಕಾಂಗ್ರೆಸ್ನ ಮುಳುಗಿಸಿ ಹೋಗುತ್ತಾರೆ. 

ಕಾಂಗ್ರೆಸ್ ಮುಕ್ತ ಭಾರತ ನಮ್ಮ ಧ್ಯೇಯ ಅದನ್ನು ಮಾಡುತ್ತೇವೆ, ದೇಶದಲ್ಲಿ ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಇರೋದು ಇಲ್ಲಿಯೂ ಈ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಹೋದ ಕಡೆಯೆಲ್ಲ ಕಾಂಗ್ರೆಸ್ ನೆಲ ಕಚ್ಚಿದೆ, ದಯವಿಟ್ಟು ಚಾಮರಾಜನಗರ ಕ್ಷೇತ್ರಕ್ಕೂ ಕರೆದುಕೊಂಡು ಬರಲಿ ಎಂದು ವ್ಯಂಗ್ಯವಾಡಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

B.S.Yeddyurappa Siddaramaiah ಧ್ಯೇಯ ಸವಾಲ್