ಲೋಕಾಯುಕ್ತ ನ್ಯಾಯಮೂರ್ತಿಗೆ ಚಾಕು ಇರಿತ


07-03-2018 449

ಬೆಂಗಳೂರು: ಕಚೇರಿಯಲ್ಲೇ ಲೋಕಾಯುಕ್ತ ನ್ಯಾಯಮೂರ್ತಿಗೆ ಚಾಕು ಇರಿಯಲಾಗಿದೆ. ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರ ಕೊಠಡಿಗೆ ನುಗ್ಗಿದ ತೇಜಸ್ ಶರ್ಮಾ ಎಂಬವನು ಚಾಕುವಿನಿಂದ ಇರಿದಿದ್ದಾನೆ. ವಿಶ್ವನಾಥ್ ಶೆಟ್ಟಿಯವರ ಕೈ ಮತ್ತು ಎದೆಗೆ ಚಾಕುವಿನಿಂದ ಇರಿದು, ಬಳಿಕ ಅಲ್ಲಿನಿಂದ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.
ತೇಜಸ್ ಶರ್ಮಾ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆಂದು ಬಂದಿದ್ದನೆಂದು ಹೇಳಲಾಗಿದೆ. ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ, ಸಚಿವ ಕೆ.ಜೆ.ಜಾರ್ಜ್ ಮತ್ತಿತರರು ಭೇಟಿ ನೀಡಿ, ಆರೋಗ್ಯದ ಪರಿಸ್ಥಿತಿ ಬಗ್ಗೆ ವಿಚಾರಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

lokayukta judge ತೇಜಸ್ ಶರ್ಮಾ ಆರೋಗ್ಯ