ಸರ್ಕಾರದ ವಿರುದ್ಧ ಹರಿಹಾಯ್ದ ಶೆಟ್ಟರ್


07-03-2018 401

ಹುಬ್ಬಳ್ಳಿ: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚೂರಿ ಇರಿದಿರುವುದು ಆಘಾತಕಾರಿ ವಿಷಯವಾಗಿದೆ. ಹೀಗಾಗಿ ಗೃಹ ಸಚಿವರು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದೊಂದು ಆಘಾತಕಾರಿ ವಿಷಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯದಲ್ಲಿ ಲೋಕಾಯುಕ್ತರ ಮೇಲೆ ಹಲ್ಲೆ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾಗಾದರೆ ಸಾಮಾನ್ಯ ನಾಗರಿಕರ ಸ್ಥಿತಿ ಏನಾಗಬಾರದು? ಎಂದು ಪ್ರಶ್ನಿಸಿದ್ದಾರೆ. ಪೊಲೀಸರು ಎಂದರೆ ಯಾರಿಗೂ ಭಯವಿಲ್ಲದಂತಹ ಸ್ಥಿತಿಯಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಡಲು ಸಿಎಂ ಹಾಗೂ ಗೃಹ ಸಚಿವರು‌ ಕಾರಣ ಎಂದು ಶೆಟ್ಟರ್ ಸರ್ಕಾರದ ವಿರುದ್ಧ ಹರಿಹಾಯ್ದರು.


ಒಂದು ಕಮೆಂಟನ್ನು ಬಿಡಿ