'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ'-ಸಿಎಂ


08-03-2018 446

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ, ರಾಷ್ಟ್ರಪತಿ ಆಡಳಿತ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ಜಿಲ್ಲೆ ತೂಬಿನಕೆರೆ ಹೆಲಿಪ್ಯಾಡಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ. ವರದಿ ಬಂದ ನಂತರ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಬಿಬಿಎಂಪಿಯಲ್ಲಿ ಕಾಂಗ್ರೆಸ್ , ಜೆಡಿಎಸ್ ನಡುವಣ ಮೈತ್ರಿಗೂ ರಾಜ್ಯಸಭೆ ಚುನಾವಣೆಗೂ ಯಾವುದೇ ಸಂಬಂಧವಿಲ್ಲ, ಅಗತ್ಯವಿದ್ದರೆ ಜೆಡಿಎಸ್ ಬೆಂಬಲ ವಾಪಾಸ್ ಪಡೆದುಕೊಳ್ಳಬಹುದು ಎಂದು ಹೇಳಿದರು.

 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

siddaramaiah president ಬೆಂಬಲ ರಾಜ್ಯಸಭೆ