ಉಡುಪಿ ಜಿಲ್ಲಾಧಿಕಾರಿಗೆ ಬಂಧನದ ಭೀತಿ?


10-03-2018 518

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಗೆ ಬಂಧನ ಭೀತಿ ಎದುರಾಗಿದೆ. ಜಿಲ್ಲೆಯಲ್ಲಿ ನಡೆದಿದೆ ಎನ್ನಲಾದ ಭೂ ಒತ್ತುವರಿ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಕೆರೆ, ಭೂಮಿ ಒತ್ತುವರಿ ಕುರಿತು ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆ ನ್ಯಾಯಾಲಯ ಮಾಹಿತಿ ಕೇಳಿತ್ತು. ಆದರೆ ಕೋರ್ಟ್ ಸೂಚನೆಯನ್ನು ನಿರ್ಲಕ್ಷ್ಯ ವಹಿಸಿದ ಹಿನ್ನೆಲೆ ವಾರೆಂಟ್ ಜಾರಿ ಮಾಡಿದೆ. ಈಗಾಗಲೇ ಉಡುಪಿ ಜಿಲ್ಲಾ ಎಸ್ಪಿ ಕಚೇರಿಗೆ ವಾರೆಂಟ್ ಪ್ರತಿ ತಲುಪಿದೆ ಎನ್ನಲಾಗಿದೆ.


ಒಂದು ಕಮೆಂಟನ್ನು ಬಿಡಿ