ಭೀಕರ ಅಪಘಾತ 5 ಮಂದಿ ಸಾವು


13-03-2018 806

ಬೆಂಗಳೂರು: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಂತ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿ ಅದರ ಹಿಂದೆ ಬರುತ್ತಿದ್ದ ಬಸ್ ಕಾರಿಗೆ ಅಪ್ಪಳಿಸಿರುವ ಭೀಕರ ಸರಣಿ ಅಪಘಾತದಲ್ಲಿ ಬೆಂಗಳೂರಿನ ಇಬ್ಬರು ಮಹಿಳೆಯರು ಸೇರಿ ಐದು ಮಂದಿ ಸಾವನ್ನಪ್ಪಿರುವ ದುರ್ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.

ದುರ್ಘಟನೆಯಲ್ಲಿ ಕಾರಿನಲ್ಲಿದ್ದವರು ಬಸ್‍ನಲ್ಲಿದ್ದರವರು ಸೇರಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಕಾರಿನಲ್ಲಿದ್ದ 6 ಮಂದಿಯಲ್ಲಿ ಐವರು ಮೃತಪಟ್ಟಿದ್ದು ಅವರನ್ನು ಬೆಂಗಳೂರಿನ ಲಕ್ಷ್ಮೀನಾರಾಯಣಪುರದ ಸುಮತಿ (45) ಶಂಕರ್ (50) ಸುಮತಿ, ಮಣಿ ಮತ್ತು ಕುಬೇರನ್ ಎಂದು ಗುರುತಿಸಲಾಗಿದೆ.

ಗಾಯಗೊಂಡಿರುವ ಆನಂದ್ ಸ್ಥಿತಿ ಗಂಭೀರವಾಗಿದ್ದು ಅವರನ್ನು ಕೃಷ್ಣಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಪ್ರಯಾಣಿಕರು ಚೆನ್ನೈನಲ್ಲಿ ತಮ್ಮ ಸಂಬಂಧಿಕರ ಮನೆಯಿಂದ ವಾಪಸು ಬರುತಿದ್ದ ವೇಳೆ ಎದುರುಗಡೆಯಿಂದ ಹೋಗುತಿದ್ದ ಲಾರಿಯೊಂದು ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆಯಿತು ಹಿಂಬದಿಯಲ್ಲಿದ್ದ ಇಕೋ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ಕಾರಿನ ಹಿಂಬದಿಯಲ್ಲಿದ್ದ ಕೆಎಸ್‍ಆರ್‍ಟಿಸಿ ಬಸ್ಸು ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಲಾರಿ ಮತ್ತು ಬಸ್ಸಿನ ನಡುವೆ ಸಿಲುಕಿಕೊಂಡ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸಿನಲ್ಲಿ ಪ್ರಯಾಣಿಸಯುತಿದ್ದ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದೆ.

ಕರ್ನಾಟಕ ನೋಂದಣಿಯ ಕಾರು ಅಪಘಾತಕ್ಕೀಡಾಗಿದ್ದು, ಈ ಕಾರಿನಲ್ಲಿ  ಸುಮತಿ, ಶಂಕರ್. ಸುಮತಿ, ಮಣಿ ಮತ್ತು ಕುಬೇರನ್ ಪ್ರಯಾಣ ಬೆಳೆಸಿದ್ದರು.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಪರಿಣಾಮ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ. ಇನ್ನು ಸ್ಥಳೀಯರು ಹಾಗೂ ಪೊಲೀಸರು, ಕಾರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮೃತ ದೇಹಗಳನ್ನು ಹೊರ ತೆಗೆಯಲು ಹರಸಾಹಸಪಟ್ಟರು. ಮೃತ ದೇಹಗಳನ್ನು ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೊಸೂರಿನ ಅಟ್ಕೊ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Lorry accident ದುರ್ಘಟನೆ ಪ್ರಯಾಣಿಕ