ಚುನಾವಣೆ: ಕೆಪಿಸಿಸಿಯಿಂದ ಮಹತ್ವದ ಸಭೆ


14-03-2018 289

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಚುರುಕುಗೊಳಿಸಿದೆ. ಇದೇ ಮೊದಲ ಬಾರಿಗೆ ದೇವನಹಳ್ಳಿಯ ಖಾಸಗಿ ರೆಸಾರ್ಟ್ನಲ್ಲಿ ಕೆಪಿಸಿಸಿ ಸಭೆ ನಡೆಸಲಾಗುತ್ತಿದೆ. ಅಭ್ಯರ್ಥಿಗಳ ಹಾಗೂ ಗೆಲ್ಲುವ ಸಂಭವವಿರುವ ಆಕಾಂಕ್ಷಿಗಳ ಬಗ್ಗೆ ಮತ್ತು ಎರಡಕ್ಕಿಂತ ಹೆಚ್ಚು ಬಾರಿ ಜಯಗಳಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಬಗ್ಗೆಯೂ ಚರ್ಚಿಸಿ ಹೈಕಮಾಂಡ್ಗೆ ಪಟ್ಟಿ ರವಾನಿಸಲಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್ ಹಾಗೂ ಸಂಸದರು, ಸಚಿವರು ಸೇರಿದಂತೆ 43 ಮಂದಿ ಸಮಿತಿಯಲ್ಲಿದ್ದಾರೆ.

ಸಭೆಯಲ್ಲಿ 2018ರ ವಿಧಾನಸಭೆ ಚುನಾವಣೆಯ ಪ್ರಮುಖ ವಿಷಯಗಳು ಚರ್ಚೆಗೆ ಬರಲಿವೆ. ಬೆಂಗಳೂರಿನ ಬಹುತೇಕ ಸಚಿವರು, ಸಂಸದರು ಭಾಗಿಯಾಗಲಿದ್ದು, ನಾಳೆ ಮೊದಲ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಇಡೀ ದಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

election congress ಚುನಾವಣಾ ಸಮಿತಿ ಉಸ್ತುವಾರಿ