ಯುವಕನ ಮೇಲೆ ಪೊಲೀಸರ ದರ್ಪ


14-03-2018 482

ಬೆಂಗಳೂರು: ದೇವರಜೀವನಹಳ್ಳಿಯಲ್ಲಿ ನಿನ್ನೆ ರಾತ್ರಿ ಮಾಮೂಲಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಪೊಲೀಸರು ಯುವಕನೊಬ್ಬನಿಗೆ ಮನಬಂದಂತೆ ಥಳಿಸಿರುವುದನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಡಿಜೆ ಹಳ್ಳಿಯಲ್ಲಿ ಪಾನಿಪುರಿ ಮಾರಾಟ ಮಾಡುತ್ತಿದ್ದ ಇಮ್ರಾನ್ ಎಂಬ ಯುವಕ ಮಾಮೂಲಿ ಹಣ ನೀಡಲು ನಿರಾಕರಿಸಿದ್ದಕ್ಕೆ ಪೇದೆಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪೊಲೀಸರ ದೌರ್ಜನ್ಯ ವಿರೋಧಿಸಿ ನಿನ್ನೆ ರಾತ್ರಿ ಸಾರ್ವಜನಿಕರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಹಣಕ್ಕಾಗಿ ವಸೂಲಿ ದಂಧೆಗಿಳಿದ ಪೊಲೀಸ್ ಪೇದೆಗಳ ವಿರುದ್ಧ ಕಿಡಿಕಾರಿದರು. ಹಲ್ಲೆಗೊಳಗಾಗಿರುವ ಯುವಕನಿಗೆ ಚಿಕಿತ್ಸೆ ಕೊಡಿಸಬೇಕು ಮತ್ತು ವಸೂಲಿಗಾಗಿ ಹಲ್ಲೆ ಮಾಡಿದ ಪೊಲೀಸ್ ಪೇದೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಹಿರಿಯ ಅಧಿಕಾರಿಗಳು ಚಿಕಿತ್ಸೆ ನೀಡುವ ಭರವಸೆ ನೀಡಿ, ಹಲ್ಲೆ ಮಾಡಿದ ಪೇದೆಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹಿರಿಯ ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಪ್ರತಿಭಟನೆ ಹಿಂಪಡೆದಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

police protest ಹಿರಿಯ ಅಧಿಕಾರಿ ಸಾರ್ವಜನಿಕ