ಮಾಂಗಲ್ಯ ಸರ ಕಸಿದು ಪರಾರಿ


14-03-2018 639

ಕೊಪ್ಪಳ: ಜಿಲ್ಲೆಯಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದೆ. ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿಯಲ್ಲಿ ಮಹಿಳೆಯೊಬ್ಬರ ಮಾಂಗಲ್ಯ ಸರ ಕಸಿದು ಪರಾರಿಯಗಿದ್ದಾರೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾಂಗಲ್ಯ ಸರ ದೋಚಿದ್ದಾರೆ. ಸಂಜೆ ವೇಳೆ ವಾಯುವಿಹಾರಕ್ಕೆಂದು ತೆರಳಿದ್ದ ನಾಗಜ್ಯೋತಿ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಎದುರುಗಡೆಯಿಂದ ಬೈಕ್ ನಲ್ಲಿ ಬಂದ ಇಬ್ಬರು 40ಗ್ರಾಂ.ನ ಬಂಗಾರದ ಮಾಂಗಲ್ಯ ಸರ ಎಗರಿಸಿದ್ದಾರೆ. ಗಂಗಾವತಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

chain robbery women ಹಾವಳಿ ದುಷ್ಕರ್ಮಿ