ಪತ್ನಿ ಕುತ್ತಿಗೆಗೆ ಪತಿಯಿಂದ ಚಾಕು ಇರಿತ


20-03-2018 453

ಬೆಂಗಳೂರು: ಚೋಳೂರು ಪಾಳ್ಯದ ಮಂಜುನಾಥ್ ನಗರದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಪತಿ ಮನೆಯ ಬಾಗಿಲು ಹಾಕಿಕೊಂಡು ಪರಾರಿಯಾಗಿರುವ ದುರ್ಘಟನೆ ನಡೆದಿದೆ. ಚಾಕು ಇರಿತದಿಂದ ಕುತ್ತಿಗೆಗೆ ಗಂಭೀರವಾಗಿ ಗಾಯಗೊಂಡಿರುವ ವೇದ ಕುಮಾರಿ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಕೃತ್ಯ ಎಸಗಿದ ಪತಿ ಮಂಜುನಾಥ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಾತ್ರಿ ಪತಿ-ಪತ್ನಿ ಮಾಡಿಕೊಂಡ ಜಗಳ ವಿಕೋಪಕ್ಕೆ ತಿರುಗಿದಾಗ ಪತ್ನಿಯ ಕುತ್ತಿಗೆಯನ್ನು ಚಾಕುವಿನಿಂದ ಇರಿದು ಪತಿ ಮಂಜುನಾಥ್ ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದಾನೆ. ಗಾಯಗೊಂಡಿದ್ದ ವೇದ ಕುಮಾರಿಗೆ ರಕ್ಷಣೆಗೆ ಕೂಗಿಕೊಂಡಿದ್ದು, ಸ್ಥಳೀಯರು ಧಾವಿಸಿ, ವೇದ ಕುಮಾರಿಯನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿ ಪೊಲೀಸರು ವಿಷಯ ಮುಟ್ಟಿಸಿದ್ದು, ಕೆ.ಪಿ. ಅಗ್ರಹಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

stabbed knife ಪ್ರಾಣಪಾಯ ಪ್ರಕರಣ