ಪಾಲಿಕೆ ಸದಸ್ಯನ ಹತ್ಯೆಗೆ ಸಂಚು: ಆರೋಪಿ ಬಂಧನ


22-03-2018 307

ಬೆಂಗಳೂರು: ಬರುವ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಜಮೀರ್ ಎದುರಾಳಿಯಾಗಿ ಸ್ಪರ್ಧೆ ಮಾಡಲು ತಯಾರಾಗಿದ್ದ ಪಾಲಿಕೆ ಸದಸ್ಯನ ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣ ಬೆಳಕಿಗೆ ಬಂದಿದ್ದು ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಗರ ಪೊಲೀಸರು ನಿರಾಕರಿಸಿದ್ದಾರೆ.

ಜೆಡಿಎಸ್‍ನಿಂದ ಸ್ಪರ್ಧೆಗೆ ಸಿದ್ಧವಾಗಿದ್ದ ಕಾರ್ಪೋರೇಟರ್ ಇಮ್ರಾನ್ ಪಾಷಾರನ್ನು ಕೊಲೆ ಮಾಡಲು ಸುಪಾರಿ ನೀಡಲಾಗಿತ್ತು. ಸುಪಾರಿ ಪಡೆದಿದ್ದ ಹಂತಕನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸುಪಾರಿ ಹಂತಕ ಅಸ್ಲಾಂ ಅಲಿಯಾಸ್ ಹಾವೇರಿ ಅಸ್ಲಾಂ ಬಂಧಿತ ಆರೋಪಿಯಾಗಿದ್ದಾನೆ.

ಮತ್ತೊಂದು ವಾರ್ಡ್ ಕಾರ್ಪೋರೇಟರ್ ಪತಿ ಐವತ್ತು ಲಕ್ಷ ರೂಪಾಯಿಗೆ ಹತ್ಯೆಗೆ ಸುಪಾರಿ ನೀಡಿದ್ದ, ಆಗಸ್ಟ್ ನಲ್ಲಿ ಕೊಲೆ ಮಾಡಲು ಹೋಗಿ ಪ್ಲಾನ್ ಪ್ಲಾಫ್ ಆಗಿ ಆರೋಪಿ ಓಡಿಹೋಗಿದ್ದ ಎಂದು ತಿಳಿದುಬಂದಿದೆ. ಒಂದು ವರ್ಷದಿಂದ ಮೋಸ್ಟ್ ವಾಟೆಂಡ್ ಆಗಿದ್ದ ಆರೋಪಿಯನ್ನ ಸದ್ಯ ಬಾಣಾಸವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಒಂದು ರಿವಾಲ್ವರ್, ಆರು ಸಜೀವ ಗುಂಡುಗಳನ್ನ ವಶಕ್ಕೆ ಪಡೆದಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

most wanted plan ಕಾರ್ಪೋರೇಟರ್ ವಾರ್ಡ್