ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆ...


23-03-2018 516

ಬಳ್ಳಾರಿ: ಭ್ರಷ್ಟಾಚಾರ ಮುಕ್ತ ಸಮಾಜಕ್ಕಾಗಿ ಆರ್.ಟಿ.ಐ ಕಾರ್ಯಕರ್ತ ಹಾಗು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಅವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಬಳ್ಳಾರಿಯಿಂದ ಬೆಂಗಳೂರುವರೆಗೂ 13 ದಿನಗಳ ಕಾಲ ನಡೆಯಲಿರುವ ಪಾದಯಾತ್ರೆಗೆ ವಿವಿಧ ಮಠಾಧೀಶರು ಚಾಲನೆ ನೀಡಿದರು. ಬಳ್ಳಾರಿಯ ಮೋತಿ ವೃತ್ತದಲ್ಲಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪಾದಯಾತ್ರೆ ಆರಂಭಸಿದ್ದಾರೆ. ಲೋಕಪಾಲ್ ಮಸೂದೆಗಾಗಿ ಅಣ್ಣಾ ಹಜಾರೆ ಪ್ರತಿಭಟನೆಗೆ ಬೆಂಬಲವಾಗಿ ಪಾದಯಾತ್ರೆ ಮಾಡುತ್ತಿರುವುದಾಗಿಯೂ ಮತ್ತು ಮತದಾನದ ಬಗ್ಗೆ ಜಾಗೃತಿ ಮೂಡಿಸಿ, ಭ್ರಷ್ಟಾಚಾರ ಮುಕ್ತ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಗೆಲ್ಲಿಸುವಂತೆ ಪಾದಯಾತ್ರೆಯಲ್ಲಿ ಜನರ ಬಳಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Rajashekar mulali padayatre ಮಠಾಧೀಶ ಭ್ರಷ್ಟಾಚಾರ