ಯಾದಗಿರಿಯಲ್ಲಿ ಕುಖ್ಯಾತ ಕಳ್ಳನ ಬಂಧನ


24-03-2018 507

ಯಾದಗಿರಿ: ಹಲವು ದಿನಗಳಿಂದ ಯಾದಗಿರಿ ಪೊಲೀಸರಿಗೆ ತಲೆನೋವಾಗಿದ್ದ ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಾದಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಯಾದಗಿರಿಯಲ್ಲಿ ಸರಣಿ ಕಳ್ಳತನ ಮಾಡಿದ್ದ ಖದೀಮರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿಯಾಗಿದ್ದ  ಭೀಮರಾಯ ಮತ್ತು ಮಲ್ಲಪ್ಪ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 2ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 12 ಸಾವಿರ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

yadgir Notorious thief ಆರೋಪಿ ಸರಣಿ ಕಳ್ಳತನ