ದಾಖಲೆಗಳಿಲ್ಲದ 4ಲಕ್ಷ ಹಣ ಜಪ್ತಿ


31-03-2018 615

ಚಿಕ್ಕಬಳ್ಳಾಪುರ: ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಸುಮಾರು 4ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಚಿಂತಾಮಣಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾಲ್ಲೂಕಿನ ಮಾಡಿಕೆರೆ ಕ್ರಾಸ್ ಬಳಿ ಅನುಮಾನಸ್ಪದವಾಗಿ ಬರುತ್ತಿದ್ದ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಗುತ್ತಿಗೆದಾರ ಚಲಮಾರೆಡ್ಡಿ ಎಂಬುವರನ್ನು‌ ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರದಿಂದ ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ, ಸಿಪಿಐ ಭೈರಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

ಆಂಧ್ರಪ್ರದೇಶ ಪ್ರಕರಣ illegal money police