ಚುನಾವಣಾ ಆಯೋಗಕ್ಕೆ ದೇವೇಗೌಡರ ದೂರು


05-04-2018 503

ಬೆಂಗಳೂರು: ಜಾತ್ಯತೀತ ಜನತಾದಳದ ಅಧ್ಯಕ್ಷ ಹಾಗು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬೆಂಗಳೂರಿನಲ್ಲಿ ಇಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಓಂ ಪ್ರಕಾಶ್ ರಾವತ್ ಅವರಿಗೆ ದೂರು ಸಲ್ಲಿಸಿದ್ದಾರೆ. ರಾಜ್ಯದ ನಿಗಮ ಮಂಡಳಿಗಳ ಅಧ್ಯಕ್ಷರು ನೀತಿ ಸಂಹಿತೆ ಜಾರಿಯಾಗಿದ್ದರೂ ಇನ್ನೂ ಕಾರ್ಯನಿರ್ವಹಿಸುತ್ತಿದ್ದಾರೆ, ಅವರ ಕಾರ್ಯನಿರ್ವಹಣೆಗೆ ತಡೆಯೊಡ್ಡಬೇಕು ಎಂದು ದೇವೇಗೌಡ ಮನವಿ ಮಾಡಿದ್ದಾರೆ.

ಜೊತೆಗೆ, ಮುಖ್ಯಮಂತ್ರಿಗಳ ಕಚೇರಿಯಲ್ಲಿ ಹಣ ಸಂಗ್ರಹಿಸಿ ಚುನಾವಣೆಗೆ ಬಳಸಲು ಕಳುಹಿಸಲಾಗುತ್ತಿದೆ.ಅದನ್ನು ತಡೆಯಬೇಕಿದೆ. ಮುಖ್ಯಮಂತ್ರಿಗಳು ಚುನಾವಣೆಗೆ ಅನುಕೂಲವಾಗುವಂತೆ ತಮ್ಮ ತವರು ಜಿಲ್ಲೆ ಮೈಸೂರಿಗೆ ಬೇಕಾದ ಅಧಿಕಾರಿಗಳನ್ನು ವರ್ಗಾಯಿಸಿಕೊಂಡಿದ್ದಾರೆ. ಇದರಿಂದ ನಿಷ್ಪಕ್ಷಪಾತವಾದ ಚುನಾವಣೆ ನಡೆಸುವುದು ಕಷ್ಟ. ಹಾಗಾಗಿ, ಕಳೆದ ಮೂರು ತಿಂಗಳ ಅವಧಿಯಲ್ಲಿ ನಡೆದಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳ ವರ್ಗಾವಣೆಯನ್ನು ಚುನಾವಣಾ ಆಯೋಗ ಪರಿಶೀಲಿಸಬೇಕು ಎಂದು ದೇವೇಗೌಡ ಮುಖ್ಯ ಚುನಾವಣಾ ಆಯುಕ್ತರಿಗೆ ಸಲ್ಲಿಸಿರುವ ಲಿಖಿತ ದೂರಿನಲ್ಲಿ ತಿಳಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ