ಪ್ರಧಾನಿ ಮೋದಿಗೆ ರಕ್ತದಲ್ಲಿ ಯುವಕನ ಪತ್ರ


06-04-2018 315

ವಿಜಯಪುರ: ತಮ್ಮ ಪಟ್ಟಣಕ್ಕೆ ಸರ್ಕಾರಿ ಪ್ರೌಢ ಶಾಲೆ ಬೇಕು ಎಂದು ಯುವಕನೊರ್ವ ರಕ್ತದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ನಿವಾಸಿ ವಿಜಯರಂಜನ ಜೋಶಿ ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಯುವಕ. ಹದಿನೈದು ಸಾವಿರ ಜನಸಂಖ್ಯೆ ಇರುವ ನಾಲತವಾಡ ಪಟ್ಟಣದಲ್ಲಿ ಸರ್ಕಾರಿ ಪ್ರೌಢ ಶಾಲೆ, ಕಾಲೇಜುಗಳು ಯಾವುದೂ ಇಲ್ಲ.

ನಾಲತವಾಡದಲ್ಲಿ ಸರ್ಕಾರಿ ಪ್ರೌಢಶಾಲೆ, ಕಾಲೇಜು ನಿರ್ಮಿಸುವಂತೆ ಶಿಕ್ಷಣ ಇಲಾಖೆಗೆ, ಶಿಕ್ಷಣ ಸಚಿವರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ಹತ್ತಾರು ಹಳ್ಳಿಗಳಿಂದ ದೂರ ಹೋಗಿ ವಿದ್ಯಾರ್ಥಿಗಳು ಕಾಲೆಜು ಕಲಿಯಲು ಆಗುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಬರಗಾಲ, ಬಡತನ ಇರುವುದರಿಂದ ಖಾಸಗಿ ಶಾಲೆಗಳಲ್ಲಿ ಓದಿಸುವಷ್ಟು ಆರ್ಥಿಕವಾಗಿ ಅಷ್ಟು ಶಕ್ತರಲ್ಲ. ಸರ್ಕಾರಿ ಶಾಲೆ ಇಲ್ಲದೆ, ಶಿಕ್ಷಣ ಸಿಗದ ಕಾರಣ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿವೆ ಎಂದು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ. ನನಗೆ ತುಂಬ ನೋವಾಗಿದೆ, ನೀವಾದರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತೀರಿ ಎಂಬ ನಂಬಿಕೆ ಮೇಲೆ ರಕ್ತದಲ್ಲೇ ಆರು ಪುಟಗಳ ಪತ್ರ ಬರೆದಿದ್ದೇನೆ ಎಂದು ನೋವು ತೋಡಿಕೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Blood letter ನೋವು ಪ್ರೌಢ ಶಾಲೆ