'ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ನಾಶಮಾಡುವ ಹುನ್ನಾರ’


06-04-2018 506

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (ಎಸ್‌ಸಿ/ಎಸ್‌ಟಿ) ದೌರ್ಜನ್ಯ ತಡೆ ಕಾಯ್ದೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಅತ್ಯಂತ ಖೇದಕರ, ಇದರ ಹಿಂದೆ ಕಾಣದ ಶಕ್ತಿಗಳ ಕೈವಾಡ ಇರಬಹುದು ಎಂದು ಗುಜರಾತ್ನ ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದಾರೆ. ಗುಜರಾತ್ ಅನ್ನು ಮಾದರಿ ರಾಜ್ಯ ಎಂದು ಹೇಳುತ್ತಾರೆ ಆದರೆ ದಲಿತರ, ಆದಿವಾಸಿಗಳ, ಕಾರ್ಮಿಕರ, ರೈತರ ಪರಿಸ್ಥಿತಿ ನಿಕೃಷ್ಟವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಅಟ್ರಾಸಿಟಿ ಆ್ಯಕ್ಟ್ಅನ್ನು ನಾಶಮಾಡುವ ಹುನ್ನಾರ ನಡೆಯುತ್ತಿದೆ, ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಬಿಜೆಪಿ ನಾಯಕರು ಒಂದೇ ಒಂದು ಹೇಳಿಕೆ ನೀಡಿಲ್ಲ, ನ್ಯಾಯಮೂರ್ತಿ ಲೋಯಾ ಅವರ ಹತ್ಯೆಯ ಬಗ್ಗೆ ಯಾವ ನ್ಯಾಯಾಧೀಶರು ಮಾತನಾಡುತ್ತಿಲ್ಲ, ಇದು ಸ್ಪಷ್ಟ ಉದಾಹರಣೆ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ. ದೇಶದಲ್ಲಿ ಇವಿಎಂ ಗೊಂದಲವಿದೆ, ನನ್ನ ಆಯ್ಕೆ ಬ್ಯಾಲೆಟ್ ಪೇಪರ್ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ