‘ಸಿಎಂ ವಿರುದ್ಧ ದೂರು ರಾಜಕೀಯ ಪ್ರೇರಿತ’-ಪರಂ


06-04-2018 441

ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಹೆಚ್.ಡಿ.ದೇವೇಗೌಡರು ನೀಡಿರುವ ದೂರು ರಾಜಕೀಯ ಪ್ರೇರಿತ ಎಂದು ಕೋಲಾರ ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ್ಯ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಕಂಪ್ಲೇಟ್ ಕೊಟ್ಟ ಮಾತ್ರಕ್ಕೆ ಎಲ್ಲವೂ ನಿಜವಾಗಲ್ಲ, ಕೇಂದ್ರ ಚುನಾವಣಾ ಆಯೋಗ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ ಎಂದು ಪರಮೇಶ್ವರ್ ಹೇಳಿದರು. ರಾಜ್ಯ ಸರ್ಕಾರ ಅಧಿಕಾರಿಗಳನ್ನ ದುರುಪಯೋಗ ಮಾಡಿಕೊಳ್ಳುವ ಆರೋಪವನ್ನು ಪರಮೇಶ್ವರ್ ಅಲ್ಲಗೆಳೆದರು. ನಾಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಕೋಲಾರ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ, ಕಾರ್ಯಕ್ರಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

G. Parameshwara siddaramaiah ಅಧ್ಯಕ್ಷ ದುರುಪಯೋಗ