ಕಾಂಗ್ರೆಸ್ ಬೆಂಬಲಿತ ದರ್ಶನ್ ಪುಟ್ಟಣ್ಣಯ್ಯರಿಂದ ಪ್ರಚಾರ


13-04-2018 562

ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ, ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ ಘೋಷಿಸಿರುವ ಹಿನ್ನೆಲೆಯಲ್ಲಿ ದುದ್ದ ಗ್ರಾಮದಿಂದ ಪ್ರಚಾರ ಆರಂಭಿಸಿದ ದರ್ಶನ್ ಗೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.

ಮಾಜಿ ಶಾಸಕ ಹೆಚ್.ಬಿ.ರಾಮು, ತಾ.ಪಂ.ಸದಸ್ಯ‌ ಬೋರೆಗೌಡ, ಮನ್ಮುಲ್‌ ಮಾಜಿ ಅಧ್ಯಕ್ಷ ಚಂದ್ರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಪ್ರಚಾರದಲ್ಲಿ  ದರ್ಶನ್ ತಾಯಿ  ದಿವಂಗತ ರೈತ ನಾಯಕ ಪುಟ್ಟಣ್ಣಯ್ಯ ಅವರ ಪತ್ನಿ ಸುನೀತ ಪುಟ್ಟಣ್ಣಯ್ಯ ಸೇರಿದಂತೆ ರೈತ ಸಂಘದ ಕಾರ್ಯಕರ್ತರು ಪಾಲ್ಗೊಂಡಿದ್ದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

darshan puttannaiah Karnataka election ದೇವಾಲಯ ಪ್ರಚಾರ