ಬೆಂಗಳೂರು-ಮೈಸೂರಲ್ಲಿ ವಿವಿಧೆಡೆ ಐಟಿ ದಾಳಿ


24-04-2018 455

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಮೈಸೂರು ಹಾಗೂ ಬೆಂಗಳೂರಿನಲ್ಲಿಂದು ಗುತ್ತಿಗೆದಾರರ ವಿವಿಧ ತಾಣಗಳಲ್ಲಿ ಐಟಿ ದಾಳಿ ನಡೆಸಿದೆ. ಮೈಸೂರಿನಲ್ಲಿ ಹನ್ನೊಂದು ಕಡೆ ಹಾಗೂ ಬೆಂಗಳೂರಿನಲ್ಲಿ ಒಂದೆಡೆ ದಾಳಿ ನಡೆಸಲಾಗಿದೆ. ಗುತ್ತಿಗೆದಾರರು ಚುನಾವಣೆ ಮೇಲೆ ಪ್ರಭಾವ ಬೀರುತ್ತಿದ್ದು, ಹಣದ ಹಂಚಿಕೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ವಿಭಾಗವು ದಾಳಿ ನಡೆದಿದೆ.

ಬ್ಯಾಂಕ್ ಖಾತೆಗಳಲ್ಲಿ ಹಣ ದೊಡ್ಡ ಪ್ರಮಾಣದಲ್ಲಿ ತೆಗೆದಿರುವ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಲಾಗಿದೆ. ಐಟಿ ದಾಳಿ ರಾಜಕಾರಿಣಿಗಳ ಮೇಲೂ ನಡೆಯಲಿದೆ ಎಂಬ ಮಾಧ್ಯಮ ವರದಿಯನ್ನು ಅಲ್ಲಗಳೆದಿರುವ ಇಲಾಖೆ ಕೇವಲ ಗುತ್ತಿಗೆದಾರರ ಮೇಲೆ ದಾಳಿ ನಡೆದಿದೆ ಎಂದು ಸ್ಪಷ್ಟಪಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಐಟಿ ದಾಳಿ ಕುರಿತು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಲೋಕೋಪಯೋಗಿ ಇಲಾಖೆ ಸಚಿವ ಮಹದೇವಪ್ಪ ಅವರ ಮನೆ ಮೇಲೆ ದಾಳಿ ನಡೆದಿರುವುದಾಗಿ ವದಂತಿ ಹಬ್ಬಿತ್ತು. ಇದನ್ನು ಖಂಡಿಸಿರುವ ಅವರು ರಾಜಕೀಯ ಪ್ರೇರಿತ ದಾಳಿ ಇದಾಗಿದೆ ಎಂದು ದೂರಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಡಾ. ಜಿ. ಪರಮೇಶ್ವರ್ ಅವರೂ ಸಹ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ದೂರಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

income tax political ಮಹದೇವಪ್ಪ ಜಿ. ಪರಮೇಶ್ವರ್