ಬಾದಾಮಿಯಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಕೆ


24-04-2018 291

ಬೆಂಗಳೂರು: ಬಾದಾಮಿ ಮತಕ್ಷೇತ್ರದಲ್ಲಿ ಬಿಜೆಪಿ ‌ಪಕ್ಷದಿಂದ ಸಂಸದ ಶ್ರಿರಾಮುಲು ಸೇರಿದಂತೆ ಮೂವರ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಪಕ್ಷದಿಂದ ಶ್ರೀರಾಮುಲು ಜೊತೆಗೆ ಮಹಾಂತೇಶ ಮಮದಾಪೂರ ಹಾಗೂ ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ, ಸಹ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ತಂತ್ರ ಮಾಡಿದರೆ, ಪತ್ರಿ ತಂತ್ರ ಮಾಡಲು ಬಿಜೆಪಿ ಸಜ್ಜಾಗಿದೆ ಎಂದು ಬಾದಾಮಿಯಲ್ಲಿ ನಾಮಪತ್ರ ಸಲ್ಲಿಕೆ ನಂತರ ಶ್ರೀರಾಮುಲು ಹೇಳಿಕೆ ನೀಡಿದರು.

ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಬಿಜೆಪಿ ನಾಯಕರ ನೇತ್ರತ್ವದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಜಯಗಳಿಸಲಿದ್ದೇವೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಮಾತನಾಡಿ, "ಸಿದ್ದರಾಮಯ್ಯ ಸೋಲಿನ ಭಯದಿಂದ ಬಾದಾಮಿಗೆ ಬಂದಿದ್ದಾರೆ. ಸಿದ್ದರಾಮಯ್ಯರಿಗೆ ಬಾದಾಮಿ, ಗೋಡಂಬಿ, ದ್ರಾಕ್ಷಿ ಏನೂ ಸಿಗಲ್ಲ. ಹಿಂದುಳಿದ ವರ್ಗಗಳ ನಾಯಕ ಶ್ರೀರಾಮುಲುರನ್ನು ಜನರು ಗೆಲ್ಲಿಸಲಿದ್ದಾರೆ" ಎಂದು ಹೇಳಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Sriramulu nomination ವಿಶ್ವಾಸ ಜಗದೀಶ ಶೆಟ್ಟರ್