ಬಂಧನಕ್ಕೊಳಗಾಗಿದ್ದ ವ್ಯಕ್ತಿ ಲಾಕಪ್ ನಲ್ಲೇ ಸಾವು


25-04-2018 498

ತುಮಕೂರು: ಗಲಾಟೆ ಪ್ರಕರಣ ಒಂದರಲ್ಲಿ ಬಂಧಿಸಿ ಠಾಣೆಗೆ ಕರೆ ತಂದಿದ್ದ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ತುಮಕೂರು ನಗರ ಪೋಲಿಸ್ ಠಾಣೆಯಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ಅಲ್ತಾಫ್ ಮೃತ ವ್ಯಕ್ತಿ, ಈತ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಲಾಕಪ್ ಡೆತ್ ಆಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಘಟನೆ ನಡೆದ ತುಮಕೂರು ನಗರ ಠಾಣೆಗೆ ಎಸ್ಪಿ ದಿವ್ಯಾ ಗೋಪಿನಾಥ್, ಎಎಸ್ಸ್ಪಿ ಶೋಭಾರಾಣಿ ಸೇರಿದಂತೆ ಹಿರಿಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

police accused ಗಲಾಟೆ ಲಾಕಪ್ ಡೆತ್