‘ಅನಂತಕುಮಾರ್ ಪ್ರಶ್ನೆಗಳಿಗೆ ರಾಹುಲ್ ಉತ್ತರಿಸಬೇಕು’


26-04-2018 373

ಬೆಂಗಳೂರು: ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನಿ ಬಿಜೆಪಿ ಅಭ್ಯರ್ಥಿಗಳು ಸೇರಿದಂತೆ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಜೊತೆ ಸಂವಾದ ನಡೆಸಿದ್ದಾರೆ, ಕಾರ್ತಕರ್ತರು ಖುಷಿಯಾಗಿದ್ದಾರೆ ಎಂದು, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು ಜಾವ್ಡೇಕರ್, ರೈತರ ಸಮಸ್ಯೆಗಳು, ಬೆಂಗಳೂರು ಸುಂದರ ಪಡಿಸೋದಕ್ಕೆ ಏನು ಮಾಡಬೇಕು ಎಂಬ ಅಂಶಗಳ ಬಗ್ಗೆ ಪ್ರಧಾನಿ ಸಂವಾದ ನಡೆಸಿದ್ದಾರೆ. ರಾಜ್ಯದ ಅಭಿವೃದ್ಧಿ ಗೆ ಏನು ಮಾಡಬೇಕು ಎಂಬುದರ ಬಗ್ಗೆ ಸಂವಾದದಲ್ಲಿ ಮಾತನಾಡಿದ್ದಾರೆ, ಈ ಮೂಲಕ ಪ್ರಧಾನಿ ಜನಸಾಮಾನ್ಯರ ಹೃದಯ ಗೆಲ್ಲುತ್ತಿದ್ದಾರೆ ಎಂದು ನುಡಿದರು.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ರಾಜ್ಯ ಪ್ರವಾಸದಲ್ಲಿದ್ದಾರೆ, ಅವರು ರೈತರ  ಆತ್ಮಹತ್ಯೆಗಳ ಬಗ್ಗೆ ಮಾತನಾಡಬೇಕು, ಕಾಂಗ್ರೆಸ್ ಸರ್ಕಾರ ರೈತರ ಪರ ಯಾವ ನೀತಿಗಳನ್ನು ತೆಗೆದುಕೊಂಡಿದೆ ಎಂದು ಹೇಳಬೇಕ., ನಿನ್ನೆ ಕೆಂದ್ರ ಸಚಿವ ಅನಂತ್ ಕುಮಾರ್ ಕೇಳಿರುವ ಐದು ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 50 ಸೀಟ್ ಗಳನ್ನೂ ಪಡೆಯಲ್ಲ, ನಾಮಪತ್ರ ಸಲ್ಲಿಕೆ ಮುಗಿದ ಬಳಿಕ ಮತ್ತೊಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ, ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಆಗಲ್ಲ, ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Prakash Javadekar Farmers ವಿಶ್ವಾಸ ಬಹುಮತ