ಬಿಎಸ್ ವೈ ವಿರುದ್ಧ ವಿರೂಪಾಕ್ಷಪ್ಪ ಗಂಭೀರ ಆರೋಪ


27-04-2018 493

ಕೊಪ್ಪಳ: ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಂಸದ ಹಾಗು ರಾಯಣ್ಣ ಬ್ರಿಗೇಡ್ ನ ರಾಜ್ಯಾಧ್ಯಕ್ಷ ವಿರೂಪಾಕ್ಷಪ್ಪ, ಜಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಯಡಿಯೂರಪ್ಪನವರಿಗೆ ಹಿಂದುಳಿದ ವರ್ಗದವರನ್ನು ಕಂಡರೆ ಆಗಲ್ಲ. ಅವರಿಗೆ ಮೇಲ್ವರ್ಗದ ಜನರು ಮಾತ್ರ ಬೇಕು. ಬಿಎಸ್ ವೈ ಮೈಯಲ್ಲೆಲ್ಲಾ ವಿಷವಿದೆ‌ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾನು ರಾಯಣ್ಣ ಬ್ರಿಗೇಡ್ ಕಟ್ಟಿದ್ದರಿಂದ ಟಿಕೆಟ್ ಕೈ ತಪ್ಪಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ, ಆದ್ದರಿಂದ ಬಿಜೆಪಿ ಡಮ್ಮಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.


ಒಂದು ಕಮೆಂಟನ್ನು ಬಿಡಿ