ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ


27-04-2018 568

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ‌ ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಮುಖಂಡರಾದ ಸಂಸದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್,  ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಡಾ.ಎಂ.ವೀರಪ್ಪ ಮೊಯ್ಲಿ, ಕೆಪಿಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಪಕ್ಷದ ಜಿಲ್ಲಾ ಉಸ್ತುವಾರಿ ವಿಷ್ಣುನಾಥನ್, ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶಗಳು:

1. ಪ್ರತಿ ಮೂರು ಜಿಲ್ಲೆಗೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.

2. ಮುಂದಿನ 5 ವರ್ಷಗಳಲ್ಲಿ ಕೃಷಿಗೆ 1.25 ಕೋಟಿ ರೂಪಾಯಿ ಹಣ ಮೀಸಲು.

3. ಹುಬ್ಬಳ್ಳಿ-ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ.

4. 75 ಟಿಎಂಸಿ ಕಾವೇರಿ ನೀರು ಸದ್ಬಳಕೆಗೆ ನೀಲ ನಕ್ಷೆ ರಚನೆ.

5. ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಒತ್ತು.

6. 2 ಸಾವಿರ ಜನಸಂಖ್ಯೆಯುಳ್ಳ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ.

7. ತಾಲೂಕು, ಗ್ರಾಮ ಪಂಚಾಯತ್ ಅಭಿವೃದ್ಧಿಗೆ ಮುಂದಿನ ಬಜೆಟ್‍ನಲಿ ಹೆಚ್ಚಿನ ಅನುದಾನ ಮೀಸಲು.

8. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಇತರೆ ಜಿಲ್ಲೆಗಳಿಗೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ.

9. ಪ್ರತಿ ಹಳ್ಳಿಗೂ 24 ಗಂಟೆ ವಿದ್ಯುತ್ ಪೂರೈಕೆಯ ಭರವಸೆ.

10. ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ, ಪುನರ್ವಸತಿ ಭರವಸೆ.

11. ಮುಂದಿನ 10 ವರ್ಷಗಳಲ್ಲಿ ಗ್ರಾಮೀಣ ಭಾಗಗಳಲ್ಲಿ 10 ಲಕ್ಷ ಮನೆಗಳ ನಿರ್ಮಾಣದ ಗುರಿ.

12. 2025ರೊಳಗೆ ನವಕರ್ನಾಟಕ ನಿರ್ಮಾಣಕ್ಕೆ ಒತ್ತು.

13. ತಮಿಳುನಾಡು ಮಾದರಿಯಲ್ಲಿಯೇ ಕನ್ನಡಿಗರಿಗೆ ಉಚಿತ ಮಾಂಗಲ್ಯ ಭಾಗ್ಯ.

14. ಚುನಾವಣೆಯಲ್ಲಿ ಗೆದ್ದರೆ 18 ವರ್ಷಗಳ ಕಾಲ ಉಚಿತ ಶಿಕ್ಷಣ ಭಾಗ್ಯ, ಈ ಮೊದಲು 10 ವರ್ಷಗಳಿಗೆ ಮಾತ್ರ ಆಗಿತ್ತು.

15. ರಾಜ್ಯದಲ್ಲಿ ಕೃಷಿ ಕಾರಿಡಾರ್ ನಿರ್ಮಾಣ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Rahul gandhi Manifasto ಕೃಷಿ ಕಾರಿಡಾರ್ ನ್ಯಾಯಯುತ