ತಮಿಳುನಾಡಿಗೆ 4 ಟಿಎಂಸಿ ನೀರು ಬಿಡಿ: ಸುಪ್ರೀಂ


03-05-2018 447

ಬೆಂಗಳೂರು: ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠದಿಂದ ಈ ಆದೇಶ ಹೊರಡಿಸಿದೆ. ಆದೇಶ ಪಾಲಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿರುವ ಸುಪ್ರೀಂ ಕೋರ್ಟ್, ಏಪ್ರಿಲ್, ಮೇ ತಿಂಗಳಲ್ಲಿ ಒಟ್ಟು 4 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಕಾವೇರಿ ನಿರ್ವಹಣಾ ಮಂಡಳಿ ರಚನೆ ಬಗ್ಗೆ ನಡೆದಿದ್ದ ವಿಚಾರಣೆಯನ್ನು ಮೇ 8ಕ್ಕೆ ವಿಚಾರಣೆ ನಿಗದಿ ಮಾಡಲಾಗಿದೆ. ಕೆ.ಆರ್.ಎಸ್ ಅಣೆಕಟ್ಟೆಯಲ್ಲಿ ಪ್ರಸ್ತುತ ಇರುವುದು ಕೇವಲ 72.46 ಅಡಿ ನೀರು. ಇದೀಗ ಸುಪ್ರೀಂ ಆದೇಶದಂತೆ ತಮಿಳುನಾಡಿಗೆ ನೀಡು ಬಿಟ್ಟರೆ ಕುಡಿಯುವ ನೀರಿಗೂ ಎದುರಾಗಲಿದೆ ತಾತ್ವರ. ಜೂನ್ ಅಂತ್ಯದವರೆಗೆ ಕುಡಿಯುವ ನೀರಿನ ಅಗತ್ಯತೆ ಇದೆ. ಅಣೆಕಟ್ಟೆಯಲ್ಲಿರುವ 72.46 ಅಡಿ ನೀರಿನಲ್ಲಿ ಕೇವಲ 7 ಟಿಎಂಸಿ ಮಾತ್ರ ಬಳಕೆಗೆ ಲಭ್ಯವಾಗಲಿದೆ.


ಒಂದು ಕಮೆಂಟನ್ನು ಬಿಡಿ