ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ


07-05-2018 552

ಬೆಂಗಳೂರು: ನಗರದ ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ದಾಳಿ ನಡೆದಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದನಪಾಳ್ಯದಲ್ಲಿ ನಿನ್ನೆ ರಾತ್ರಿ ನಡೆದಿದೆ. ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತ ರಾಘವೇಂದ್ರ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಘವೇಂದ್ರ ಅವರು ರಾತ್ರಿ ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಮನೆಗೆ ತೆರಳುವಾಗ ಮುದ್ದನಪಾಳ್ಯದಲ್ಲಿ ಬೈಕ್‍ನಲ್ಲಿ ಬಂದ 7 ಜನರು ಲಾಂಗು ಮಚ್ಚಿನಿಂದ ದಾಳಿ ನಡೆಸಿದ್ದಾರೆ.

ರಾಘವೇಂದ್ರ ಅವರು ರಕ್ಷಣೆಗಾಗಿ ಕೂಗಿಕೊಂಡಿದ್ದರಿಂದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ರಾಘವೇಂದ್ರಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂದಹಾಗೆ ರಾಘವೇಂದ್ರ ಇತ್ತೀಚೆಗಷ್ಟೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Hospital outlaw ಕಾರ್ಯಕರ್ತ ಲಾಂಗು ಮಚ್ಚು