ವಿವಿಧ ರಾಜ್ಯಗಳಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ!


10-05-2018 608

ಬೆಂಗಳೂರು: ದೆಹಲಿಯಲ್ಲಿ ಅಪ್ಪಳಿಸಿರುವ ಚಂಡಮಾರುತದಿಂದ ಮುಂದಿನ ಐದು ದಿನಗಳ ಕಾಲ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳವೆ. ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕರಾವಳಿ ಹಾಗೂ ಉತ್ತರ ಕರ್ನಾಟಕದ ಹಲವು ಭಾಗ, ತಮಿಳುನಾಡು ಹಾಗೂ ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮಧ್ಯೆ ಶನಿವಾರ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಂದು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತದಾನದ ದಿನದಂದು ಮಧ್ಯಾಹ್ನದ ಬಳಿಕ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳ ಕಾಲವೂ ರಾಜ್ಯದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಶನಿವಾರದಂದು ಮತದಾರರು ಆದಷ್ಟು ಬೇಗ ಮತದಾನ ಮಾಡುವಂತೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಶ್ರೀನಿವಾಸ್ ರೆಡ್ಡಿಯವರು ಹೇಳಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Rain cyclone ನೈಸರ್ಗಿಕ ವಿಕೋಪ ಹವಾಮಾನ