ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ


14-05-2018 486

ಹಾವೇರಿ: ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಜಿಲ್ಲೆಯ ಹವಣೂರಲ್ಲಿ ಘಟನೆ ನಡೆದಿದೆ. ಗಲಾಟೆ ಬಿಡಿಸಲು ಬಂದ ಮಹಿಳೆಯರ ಮೇಲು ಹಲ್ಲೆ ನಡೆದಿದೆ ಎಂದೆನ್ನಲಾಗಿದೆ. ಘಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮೂವರು ಕಾರ್ಯಕರ್ತರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಕಾಂಗ್ರೆಸ್ ಕಾರ್ಯಕರ್ತರಾದ ಕಲಂದರ್ ಮಹೆಬೂಬಸಾಬ ಕಲಾರಿ, ಜೆಲಾನಿ ಮೆಹೆಬೂಬಸಾಬ ಕಲಾರಿ. ಅಶೋಕ ವಡ್ಡರ, ಸಾವಿತ್ರಿ ವಡ್ಡರ ಎಂಬುವವರನ್ನು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಜೆಪಿ ಮುಖಂಡ ಪರಮೇಶ ಹೋಳಿಯಪ್ಪನವರ ಬೆಂಬಲಿಗರಿಂದ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮೊನ್ನೆ ನಡೆದ ಮತದಾನ ವೇಳೆ ಬಿಜೆಪಿಗೆ ಮತ ಹಾಕುವಂತೆ ಬಿಜೆಪಿ ಕಾರ್ಯಕರ್ತರಿಂದ ಒತ್ತಾಯ ಮಾಡಲಾಗಿದ್ದು, ಮಾತು ಕೇಳದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಮತದಾನದ ಸಂದರ್ಭದಲ್ಲಿ ನಡೆದ ಮಾತಿನ ಚಕಮಕಿ ನಿನ್ನೆ ರಾತ್ರಿ ವಿಕೋಪಕ್ಕೆ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

congress BJP ಗಲಾಟೆ ವಿಕೋಪ