ತುಮಕೂರಲ್ಲಿ ಮೂರು ಕಡೆ ಮತ ಎಣಿಕೆ ಕಾರ್ಯ


14-05-2018 656

ತುಮಕೂರು: ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದ್ದು, ತುಮಕೂರು ವಿವಿಗೆ ಜಿಲ್ಲಾಧಿಕಾರಿ ಡಾ.ವಿಶಾಲ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಾಳೆ ಬೆಳಿಗ್ಗೆ 8ಗಂಟೆಯಿಂದ ತುಮಕೂರು ವಿವಿಯ ವಿಜ್ಞಾನ, ಕಲಾ ಕಾಲೇಜು ಮತ್ತು ಪಾಲಿಟೆಕ್ನಿಕ್  ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಧುಗಿರಿ, ಪಾವಗಡ, ಕೊರಟಗೆರೆ, ಶಿರಾ ಕ್ಷೇತ್ರದ ಮತ ಎಣಿಕೆ ಕಾರ್ಯ. ವಿವಿಯ ವಿಜ್ಞಾನ ಕಾಲೇಜಿನಲ್ಲಿ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ ಕ್ಷೇತ್ರದ ಮತ ಎಣಿಕೆ. ವಿವಿಯ ಕಲಾ ಕಾಲೇಜಿನಲ್ಲಿ ಕುಣಿಗಲ್, ತುಮಕೂರು ನಗರ, ತುಮಕೂರು ಗ್ರಾಮಾಂತರ, ಗುಬ್ಬಿ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕೆ 2,500  ಸಿಬ್ಬಂದಿ ನೇಮಕಗೊಂಡಿದ್ದಾರೆ. ವಿಶ್ವವಿದ್ಯಾಲಯದ ಆವರಣದಲ್ಲಿ ಕೇಂದ್ರಿಯ ರಕ್ಷಣಾ ಪಡೆ, ಪೊಲೀಸ್ ಬಿಗಿ ಭದ್ರತೆ ಒದಗಿಸಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

counting university ಪಾಲಿಟೆಕ್ನಿಕ್ ಮತ ಎಣಿಕೆ