ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿ ಮುತ್ತಿಗೆಗೆ ಯತ್ನ


17-05-2018 427

ಶಿವಮೊಗ್ಗ: ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿದ್ದರಿಂದ ಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಮುತ್ತಿಗೆಗೆ ಯತ್ನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಯವ ಕಾಂಗ್ರೆಸ್ ಕಾರ್ಯಕರ್ತರು, ದೀನದಯಾಳ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿ ಮುತ್ತಿಗೆಗೆ ಯತ್ನಿಸಿದ್ದಾರೆ. ಈ ವೇಳೆ ಯಡಿಯೂರಪ್ಪ ಮತ್ತು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅಯ್ಯಯ್ಯೋ ಅನ್ಯಾಯ ಎಂದು ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು,  ಬಿಜೆಪಿ ಕಚೇರಿಗೆ ಟೊಮೆಟೊಗಳಿಂದ ಹೊಡೆದಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

congress shimoga ಅನ್ಯಾಯ ಪೊಲೀಸರು