ಹಲವೆಡೆ ಪಟಾಕಿ ಸಿಡಿಸಿ ಸಂಭ್ರಮ: ಕೆಲವೆಡೆ ಪ್ರತಿಭಟನೆ


17-05-2018 462

ಕೊಪ್ಪಳ: ಬಿಜೆಪಿ ಸರ್ಕಾರ ರಚನೆ ಹಾಗೂ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ, ಕೊಪ್ಪಳದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೊಪ್ಪಳದ ರಾಘವೇಂದ್ರ ಮಠದಲ್ಲಿ ರಾಯರಿಗೆ ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು ಸರ್ಕಾರ ರಚನೆಗೆ ಯಾವುದೇ ವಿಘ್ನಗಳು ಬಾರದಂತೆ ಪೂಜೆ ಸಲ್ಲಿಸಿ ಪ್ರಾರ್ಥಿಸಿಕೊಂಡಿದ್ದಾರೆ.

ಮೈಸೂರಲ್ಲೂ ಬಿಜೆಪಿ ಕಾರ್ಯಕರ್ತರು ನೂರೊಂದು ಗಣಪತಿ ದೇವಸ್ಥಾನದ ಎದುರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ಯಾದಗಿರಿಯಲ್ಲಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ, ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.  ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಹಂಚಿಕೊಂಡರು.

ಮಂಗಳೂರಿನಲ್ಲಿ ನಗರದ ಪಿವಿಎಸ್ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಯಡಿಯೂರಪ್ಪ ಅವರಿಗೆ ಜೈಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ‌‌ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದಲ್ಲೂ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಬಿಜೆಪಿ ಧ್ವಜಗಳನ್ನು ಹಿಡಿದು ಬಿಜೆಪಿ ಪಕ್ಷ, ಮುಖ್ಯಮಂತ್ರಿ ಯಡಿಯೂರಪ್ಪ . ಮೋದಿ ಪರ ಹಾಗೂ ಮಾಜಿ‌ ಶಾಸಕ ಸುನೀಲ್ ಹೆಗಡೆ ಪರ ಘೋಷಣೆ ಕೂಗಿದರು.

ಚಿತ್ರದುರ್ಗದಲ್ಲಿ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪಗೆ ಜೈಕಾರ ಹಾಕಿದರು.

ಕಾರವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಬಳ್ಳಾರಿಯಲ್ಲಿಯೂ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ, ಪಟಾಕಿ ಸಿಡಿಸಿ, ಮೋದಿಪರ ಘೋಷಣೆಗನ್ನು ಕೂಗಿದರು.

ಇನ್ನು ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ್ದಾರೆ. ಜಿಲ್ಲೆಯ ಬಂಗಾರಪೇಟೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

B.S.Yeddyurappa Kolar ಅಂಬೇಡ್ಕರ್ ಪ್ರಮಾಣ ವಚನ