ಮಂಡ್ಯದಲ್ಲಿ ಜೆಡಿಎಸ್, ಬಿಎಸ್‌ಪಿ, ಕಾಂಗ್ರೆಸ್ ಪ್ರತಿಭಟನೆ


17-05-2018 468

ಮಂಡ್ಯ: ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ಸ್ವೀಕಾರ ಹಿನ್ನೆಲೆ, ಮಂಡ್ಯದಲ್ಲಿ ಕಾಂಗ್ರೆಸ್, ಬಿಎಸ್‌ಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಂದ ಜಂಟಿ ಪ್ರತಿಭಟನೆ ಶುರುವಾಗಿದೆ. ನಗರದ ಸಂಜಯ್ ಸರ್ಕಲ್ ನಲ್ಲಿ ಸೇರಿದ ನೂರಾರು ಕಾರ್ಯಕರ್ತರು, ರಾಜ್ಯಪಾಲ ವಜುಭಾಯಿ ವಾಲಾ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಹಾಗೂ ಯಡಿಯೂರಪ್ಪ ವಿರುದ್ಧ ಧಿಕ್ಕಾರ ಕೂಗಿದ ಜೆಡಿಎಸ್, ಬಿಎಸ್‌ಪಿ, ಕಾಂಗ್ರೆಸ್ ಕಾರ್ಯಕರ್ತರು. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ತಮ್ಮ ಆಕ್ರೋಶ ವ್ಯಕ್ತಡಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ