ಶಾಸಕ ಆನಂದ್ ಸಿಂಗ್ ಪತ್ತೆಗಾಗಿ ದೂರು ದಾಖಲು


18-05-2018 711

ಬೆಂಗಳೂರು: ನಾಪತ್ತೆಯಾಗಿರುವ ಬಳ್ಳಾರಿ ಜಿಲ್ಲೆಯ ವಿಜಯನಗರ ಶಾಸಕ ಆನಂದ್ ಸಿಂಗ್ ಅವರ ಪತ್ತೆಗಾಗಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ.

ಕಳೆದ ಬುಧವಾರ ಕಾಂಗ್ರೆಸ್ ಮುಖಂಡರಿಗೆ ಖುದ್ದು ಕರೆ ಮಾಡಿ ಬೆಂಗಳೂರಿಗೆ ಬರುವುದಾಗಿ ಬಳ್ಳಾರಿಯಿಂದ ಹೊರಟ್ಟಿದ್ದ ಶಾಸಕ ಆನಂದ್ ಸಿಂಗ್ ಯಾರ ಕೈಗೂ ಸಿಕ್ಕಿಲ್ಲ ಬೆಂಗಳೂರಿನಲ್ಲೂ ಪತ್ತೆಯಿಲ್ಲ ಕೂಡಲೇ ಅವರನ್ನು ಹುಡುಕಿಕೊಡುವಂತೆ ಹೊಸಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಇನ್ನೂ ರಾಯಚೂರಿನ ಮಸ್ಕಿಯಲ್ಲಿಯೂ ಶಾಸಕ ಪ್ರತಾಪ್ ಗೌಡರನ್ನು ಹುಡುಕಿಕೊಡಿ ಎಂದು ಅಭಿಯಾನ ನಡೆಯಲಿದೆ. ಪ್ರತಾಪ್ ಗೌಡ, ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಬಾರದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಸ್ಥಳೀಯ ಕಾಂಗ್ರೆಸ್ಸಿಗರು ಎಚ್ಚರಿಸಿದ್ದಾರೆ.

ಸದ್ಯಕ್ಕೆ ಹೊಸಪೇಟೆ ಶಾಸಕ ಆನಂದ್ ಸಿಂಗ್ ಮತ್ತು ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಇನ್ನೂ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಕ್ಕಿಲ್ಲ. ಇಬ್ಬರನ್ನು ಬಿಜೆಪಿ ಹೈಜಾಕ್ ಮಾಡಿರುವ ಶಂಕೆಯನ್ನು ಕಾಂಗ್ರೆಸ್ ಪಾಳಯ ವ್ಯಕ್ತಪಡಿಸುತ್ತಿದೆ.

ಒಟ್ಟಿನಲ್ಲಿ ಬಳ್ಳಾರಿಯಿಂದ 3 ಶಾಸಕರು ಒಟ್ಟಾಗಿದ್ದು, ಆನಂದ್ ಸಿಂಗ್ ಅವರು ಸಚಿವ ಸ್ಥಾನದ ಬೇಡಿಕೆಯಿಟ್ಟಿದ್ದರು. ಅವರ ಬೇಡಿಕೆ ಈಡೇರಿಸುತ್ತೇವೆ ಅಂತ ಹೇಳಿದ್ದರೂ ಕೂಡ ಖಚಿತತೆ ಇಲ್ಲದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಅವರು ದೂರ ಉಳಿದಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Anand Singh Prathap Gowda ಅಸಮಾಧಾನ ಹೈಜಾಕ್