‘ಮೋದಿ-ಅಮಿತ್ ಷಾರಿಂದ ಪ್ರಜಾಪ್ರಭುತ್ವದ ಕಗ್ಗೊಲೆ’


18-05-2018 481

ಬೆಂಗಳೂರು: ಬಹುಮತ ಇಲ್ಲದಿದ್ದರೂ ಹಿಂಬಾಗಿಲಿನಿಂದ ಸರ್ಕಾರ ರಚನೆ ಮಾಡಿರುವ ಬಿಜೆಪಿ ವಿರುದ್ದ ಎಸ್‍ಯುಸಿಐ(ಸಿ)ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಮೈಸೂರು ಬ್ಯಾಂಕ್ ವೃತ್ತದ ಬಳಿ ಸೇರಿದ ಕಾರ್ಯಕರ್ತರು, ಬಿಜೆಪಿ ಅಧಿಕಾರಕ್ಕೆ ಬರಲು ಕಾರಣವಾಗಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ದೂರಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್ ಯುಸಿಐ(ಸಿ) ರಾಜ್ಯ ಕಾರ್ಯದರ್ಶಿ ಕೆ.ರಾಧಾಕೃಷ್ಣ, ರಾಜ್ಯ ವಿಧಾನಸಭಾ ಚುನಾವಣಾಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಂದಿಲ್ಲ.ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸಂಖ್ಯಾಬಲದೊಂದಿಗೆ ಸರ್ಕಾರ ರಚನೆಗೆ ಮುಂದಾದರೂ, ರಾಜ್ಯಪಾಲರ ಕಚೇರಿಯನ್ನು  ಮಾಡಿಕೊಂಡು, ಬಿಜೆಪಿ ಪಕ್ಷಕ್ಕೆ ಅವಕಾಶ ನೀಡಿರುವುದು ಖಂಡನೀಯ ಎಂದು ಹೇಳಿದರು.

ಈ ಹಿಂದೆ ಗೋವಾ, ಮಣಿಪುರ,ಬಿಹಾರ, ಮೇಘಾಲಯದಲ್ಲಿನ ಕಾಂಗ್ರೆಸ್ ಪಕ್ಷಗಳ ಸಂಖ್ಯಾಬಲ ಹೆಚ್ಚಾಗಿದ್ದರೂ, ಬಿಜೆಪಿ ಹಾಗೂ ಅನ್ಯ ಪಕ್ಷಗಳಿಗೆ ಸರ್ಕಾರ ರಚನೆಗೆ ಅನುವು ಮಾಡಿಕೊಡಲಾಗಿದೆ. ಆದರೆ, ಕರ್ನಾಟಕ ರಾಜಕಾರಣದಲ್ಲಿ ರಾಜ್ಯಪಾಲರು ಬೇರೆ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಹಿಂಬಾಗಿಲಿನಿಂದ ಪ್ರವೇಶಿಸಿ ಅಧಿಕಾರವನ್ನು ವಶಪಡಿಸಿಕೊಂಡಿರುವ ಬಿಜೆಪಿ ಕೇಂದ್ರ ಸರ್ಕಾರ ತನ್ನ ಫ್ಯಾಸಿಸ್ಟ್ ಧೋರಣೆ ಕೈಬಿಡಬೇಕು.ಜೊತೆಗೆ ಕರ್ನಾಟಕದಲ್ಲಿ ಸಂಖ್ಯಾಬಲ ಹೊಂದಿರುವ ಪಕ್ಷಗಳಿಗೆ ಅವಕಾಶ ನೀಡಬೇಕೆಂದು ಒತ್ತಾಯ ಮಾಡಿದರು.ಪ್ರತಿಭಟನೆಯಲ್ಲಿ ಎಸ್ ಯುಸಿಐ(ಸಿ) ಜಿಲ್ಲಾ ಕಾರ್ಯದರ್ಶಿ ವಿ.ಜ್ಞಾನಮೂರ್ತಿ,ಐಶ್ವರ್ಯ ಸೇರಿ ಪ್ರಮುಖರಿದ್ದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

SUCI(C) protest ಮೇಘಾಲಯ ಮಣಿಪುರ