ಬಿಜೆಪಿ ಹಿನ್ನಡೆಗೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಪೂಜೆ!


19-05-2018 514

ಹಾಸನ: ರಾಜ್ಯ ವಿಧಾನಸಭೆಯಲ್ಲಿ ಇಂದು ಬಹುಮತ ಸಾಬೀತು ಪಡಿಸಲು ಬಿಜೆಪಿ ಎಲ್ಲ ರೀತಿಯ ಪ್ರಯತ್ನಗಳನ್ನು ಮುಂದುವರೆಸಿದೆ. ಒಂದು ಕಡೆ ಬಿಜೆಪಿ ಕಾರ್ಯಕರ್ತರು, ಬಿಎಸ್ ವೈ ಅಭಿಮಾನಿಗಳು ವಿಶ್ವಾಸಮತ ನಿರ್ವಿಘ್ನವಾಗಿ ಸಾಬೀತು ಪಡಿಸಲೆಂದು ವಿಶೇಷ ಪೂಜೆ-ಪುನಸ್ಕಾರಗಳನ್ನು ನೆರವೇರಿಸುತ್ತಿದ್ದಾರೆ. ಆದರೆ ಇನ್ನೊಂದೆಡೆ ಬಿಜೆಪಿಗೆ ಹಿನ್ನಡೆಯಾಗಲೆಂದು  ಪೂಜೆಗಳನ್ನು ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಯಡಿಯೂರಪ್ಪನವರಿಗೆ ಹಿನ್ನಡೆಯಾಗಲಿ ಎಂದು, ಹಾಸನದ ಸಕಲೇಶ್ವರ ದೇವಾಲಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. 'ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದವರು ಒಟ್ಟಾಗಿ ಅಧಿಕಾರ ಹಿಡಿದು ಜನರ ಸಮಸ್ಯೆಗಳಿಗೆ ಸ್ಪಂದಿಸಲಿ. ಕುಮಾರ ಸ್ವಾಮಿಯವರು ಮುಖ್ಯಮಂತ್ರಿಯಾಗಲಿ, ಸಕಲೇಶಪುರದ ಶಾಸಕ ಎಚ್.ಕೆ ಕುಮಾರಸ್ವಾಮಿ ಮಂತ್ರಿಯಾಗಿ ಹೊರಹೊಮ್ಮಲಿ' ಎಂದು ಉರುಳು ಸೇವೆ ಮಾಡುವ ಮೂಲಕ ವಿಭಿನ್ನವಾಗಿ ಪೂಜೆ ಸಲ್ಲಿಸಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

yeddyurappa Congress-JDS ಉರುಳು ಸೇವೆ ಸಕಲೇಶ್ವರ