'ನಾವು ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ'-ಬಿಎಸ್ ವೈ


21-05-2018 557

ಬೆಂಗಳೂರು: ರೈತರ ಸಾಲ ಮನ್ನಾ ವಿಚಾರದ ಬಗ್ಗೆ ತುಟಿಬಿಚ್ಚದ ಮಾಜಿ ಸಿಎಂ ಯಡಿಯೂರಪ್ಪ, ಮಾದ್ಯಮದವರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನಿರಾಕರಿಸಿದ್ದಾರೆ. ಇಳಕಲ್ ಸ್ವಾಮೀಜಿಗಳು ಮೊನ್ನೆ ಲಿಂಗೈಕೈರಾಗಿದ್ದರು, ಅವರ ಅಂತಿಮ ದರ್ಶನ ಪಡೆಯಲು ಹೊರಟಿದ್ದೇನೆ. ನಂತರ ಸಂತೇಬೆನ್ನೂರು ಗ್ರಾಮದ ಹುಣಸೆಮರದ ಚನ್ನಬಸಪ್ಪ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದೇನೆ ಎಂದು ತಿಳಿಸಿದರು. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ, ಚನ್ನಬಸಪ್ಪ ಹೃದಯಾಘಾತದಿಂದ ಸಾವನ್ನಪಿದ್ದರು.

ನಾವು ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ. ನಮ್ಮ ಚಟುವಟಿಕೆ ನಿರಂತರವಾಗಿರುತ್ತದೆ. ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರ ಚುನಾವಣೆ ತಯಾರಿ ನಡೆಯುತ್ತಿದೆ. ಈಗಿನಿಂದಲೇ ಎಲ್ಲಾ ತಯಾರಿ ಮಾಡುತ್ತಿದ್ದೇವೆ. ಸೋತ ಅಭ್ಯರ್ಥಿಗಳ ಜೊತೆ ನಾಡಿದ್ದು ಸಭೆ ಕರೆದಿದ್ದೇವೆ. ಅವರಿಗೆ ಧೈರ್ಯ ಹೇಳಿ, ಮುಂದಿನ ಲೋಕಸಭಾ ಚುನಾವಣೆಗೆ ಸಜ್ಜಾಗುವಂತೆ ಚರ್ಚೆ ನಡೆಸಲಾಗುತ್ತೆದೆ ಎಂದರು ಬಿಎಸ್ ವೈ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

B.S.Yeddyurappa Legislative council ಹೃದಯಾಘಾತ ಚಟುವಟಿಕೆ